ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸಿದ ಬಿಜೆಪಿ ಸರ್ಕಾರ

Prakhara News
0 Min Read

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಮಹತ್ವದ ಕ್ರಮವೊಂದನ್ನು ಜಾರಿಗೆ ತರಲು ಮುಂದಾಗಿದೆ.
ಪ. ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಅಲ್ಲಿನ ನೂತನ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ.

ಮದರಸಾ ನಿರ್ದೇಶನಾಲಯದಿಂದ ಮೇ 21 ರಂದು ಈ ಆದೇಶ ಬಂದಿರುವುದಾಗಿದೆ. ಶಾಲೆಗಳಲ್ಲಿ ರಾಷ್ಟ್ರೀಯ ಗೀತೆಗಳನ್ನು ಹಾಡುವುದನ್ನು ಕಳೆದ ವಾರವಷ್ಟೇ ಜಾರಿಗೊಳಿಸಲಾಗಿತ್ತು. ಇದೀಗ ಹೊರಬಿದ್ದಿರುವ ಆದೇಶದ ಪ್ರಕಾರ ಮದರಸಾಗಳು, ಸರ್ಕಾರ ಸಮ್ಮತಿಸಿರುವ ಶಿಕ್ಷಾ ಕೇಂದ್ರಗಳು, ಅನುದಾನಿತ ಮದರಸಾಗಳು, ಮಾಧ್ಯಮಿಕ ಶಿಕ್ಷಾ ಕೇಂದ್ರಗಳಲ್ಲಿ ತರಗತಿ ಆರಂಭಕ್ಕೂ ಮೊದಲು ವಂದೇಮಾತರಂ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳು, ಸಿಬ್ಬಂದಿಗಳು ಇದರಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ.

Share This Article
Leave a Comment