ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸನ್ಸ್ ಕಡ್ಡಾಯಗೊಳಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.


ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಸಿಎಂ ಈ ಕುರಿತು ಮಾತನಾಡಿದರು.
ಯೂಟ್ಯೂಬ್ ಚಾನೆಲ್‌ಗಳ ಹಾವಳಿಗೆ ತಡೆ ಬ್ಲಾಕ್‌ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯೂಟ್ಯೂಬ್ ಚಾನಲ್‌ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯೂಟ್ಯೂಬ್ ಚಾನಲ್‌ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ನುಡಿದರು.
